ಮೂಡುಬಿದಿರೆ | ಕಾರು- ಶಾಲಾ ಬಸ್ ಮಧ್ಯೆ ಅಪಘಾತ: ಕಾರು ಚಾಲಕ ಗಂಭೀರ

Prasthutha|

ಮೂಡುಬಿದಿರೆ: ಕಾರು ಮತ್ತು ಶಾಲಾ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮೂಡುಬಿದಿರೆ ಅಲಂಗಾರು ಬಳಿ ನಡೆದಿದೆ.
ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

- Advertisement -


ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕಾರು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.


ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join Whatsapp