ಮೂಡುಬಿದಿರೆ: ಕಾಲೇಜಿನ ಸಿಬ್ಬಂದಿ ಆತ್ಮಹತ್ಯೆ

Prasthutha|

ಮೂಡುಬಿದಿರೆ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲ್ ರೂಮಿನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬೆಳಕಿಗೆ ಬಂದಿದೆ.

- Advertisement -

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. ಯುವಕ ಜನವರಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



Join Whatsapp