ಮೂಡಬಿದ್ರೆ: ಎಸ್.ಡಿ.ಪಿ.ಐ.ಯಿಂದ ಚುನಾವಣಾ ಪೂರ್ವಭಾವಿ ಸಭೆ

Prasthutha|

►ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತ: ಅಶ್ರಫ್ ಮಾಚಾರ್

- Advertisement -


ಮೂಡಬಿದ್ರೆ: ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಕರನ್ನೊಳಗೊಂಡ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯು ಬಜ್ಪೆಯಲ್ಲಿ ನಡೆಯಿತು.


ಪ್ರಾಸ್ತಾವಿಕವಾಗಿ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಮಾತನಾಡಿ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತ. ಇದರಿಂದ ಕೋಮುವಾದವನ್ನೇ ತನ್ನ ಉಸಿರಾಗಿಸಿರುವ ಬಿ.ಜೆ.ಪಿ.ಗೆ ತಕ್ಕ ಪಾಠ ಕಲಿಸುವ ಕಾಲ ಕೂಡಿಬಂದಿದೆ. ಕಳೆದ ಅಧಿಕಾರದಲ್ಲಿ ಬಿ.ಜೆ.ಪಿ.ಯ ಸಾಧನೆಯು ಶೂನ್ಯವಾಗಿದ್ದು ವಿರೋಧ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್ ಕೂಡ ಅದನ್ನು ಪ್ರಶ್ನಿಸಲು ಎಡವಿದ್ದು ಕಾರಣ ಅವೆರಡೂ ಕೂಡ ಒಂದೇ ನಾಣ್ಯದ ಎರಡು ಮುಖಗಳು ಎಂದರು.
ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ ಮಾತನಾಡುತ್ತಾ ಮೂಡಬಿದ್ರೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ ಮಾಡಿದ್ದು, ಅದನ್ನು ಮರೆಮಾಚಲು ಶಾಂತಿ ಕೆಡಿಸುವ ಗೂಂಡಗಳಿಗೆ ಬೆಂಬಲಿಸಿ ಅವರನ್ನು ಸ್ಟೇಶನ್ ನಿಂದಲೇ ಬಿಡಿಸುವ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂದರು.

- Advertisement -


ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು, ಕ್ಷೇತ್ರ ಸಮಿತಿ ಸದಸ್ಯರು ಹಾಗೂ ಬ್ಲಾಕ್ ಅದ್ಯಕ್ಷರು ಕಾರ್ಯದರ್ಶಿಗಳು ಹಾಗೂ ಕ್ಷೇತ್ರದ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.



Join Whatsapp