Home ಕರಾವಳಿ ಮೂಡುಬಿದಿರೆ | ಯುವಕನ ಬರ್ಬರ ಹತ್ಯೆ

ಮೂಡುಬಿದಿರೆ | ಯುವಕನ ಬರ್ಬರ ಹತ್ಯೆ

ಮೂಡುಬಿದಿರೆ: ಕ್ಷುಲ್ಲಕ ವಿಚಾರವಾಗಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ.

ಜಮಾಲ್ ಮೃತಪಟ್ಟಿರುವ ಯುವಕನಾಗಿದ್ದು, ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಜಮಾಲ್ ಮತ್ತು ಸುಹೈಬ್ ಮನೆ ಅಕ್ಕಪಕ್ಕದಲ್ಲಿದ್ದು, ಸಣ್ಣ ಮಕ್ಕಳ ವಿಚಾರವಾಗಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ ಮಾತಿಕ ಚಕಮಕಿ ನಡೆದು ಜಮಾಲ್ ಹೊಟ್ಟೆಗೆ ಸುಹೈಬ್ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ.
ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version