ಮೂಡುಬಿದಿರೆ: ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆಯ ಹೊರವಲಯದಲ್ಲಿರುವ ಹೌದಾಲ್ನಲ್ಲಿರುವ ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿ ಬುಧವಾರ ಆತ್ಮಹತ್ಯೆ ಮಾಡಿಕೊಳ್ಳುವಾಗ ಡೆತ್ ನೋಟ್ ನಲ್ಲಿ ಕಾಲೇಜಿನ ನಿವೃತ್ತ ಸಿಬ್ಬಂದಿ ಶ್ರೀಧರ ಪುರಾಣಿಕನ ಹೆಸರನ್ನು ಉಲ್ಲೇಖೀಸಿದ್ದು, ಆತನ ಲೈಂಗಿಕ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಆರೋಪಿ ಶ್ರೀಧರ ಪುರಾಣಿಕನ ವಿರುದ್ಧ ಪೋಕ್ಸೋ ಕಾಯಿದೆ, ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ದಂಡ ಸಂಹಿತೆಯ ಆಡಿಯಲ್ಲಿ ಪ್ರಕರಣ ದಾಖಲಾಗಿದೆ.