Home ಕರಾವಳಿ ಮೂಡುಬಿದ್ರೆ| ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡುಬಿದ್ರೆ| ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡುಬಿದ್ರೆ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.


ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮೂಡುಬಿದ್ರೆ ನ್ಯಾಚುರೋಪತಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ.


ಮನೆಯ‌ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆಗೈದಿದ್ದಾಳೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಮೂಡುಬಿದಿರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ.

Join Whatsapp
Exit mobile version