Home ಟಾಪ್ ಸುದ್ದಿಗಳು ಗಾಯಕ ಮೂಸೆವಾಲಾ ಹತ್ಯೆ | ನಕಲಿ ಎನ್ಕೌಂಟರ್’ನಿಂದ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹಿಂಪಡೆದ...

ಗಾಯಕ ಮೂಸೆವಾಲಾ ಹತ್ಯೆ | ನಕಲಿ ಎನ್ಕೌಂಟರ್’ನಿಂದ ರಕ್ಷಣೆ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹಿಂಪಡೆದ ಆರೋಪಿ ಲಾರೆನ್ಸ್ ಬಿಷ್ಣೋಯ್

ಅಮೃತಸರ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧಿತ ಗ್ಯಾಂಗ್’ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ದೆಹಲಿ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಹಿಂಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಪಂಜಾಬ್ ಪೊಲೀಸರು ತನ್ನನ್ನು ನಕಲಿ ಎನ್ಕೌಂಟರ್ ಮಾಡುವ ಸಾಧ್ಯೆತೆಯಿದ್ದು, ರಕ್ಷಣೆ ಒದಗಿಸುವಂತೆ ಕೋರಿ ದೆಹಲಿ ಹೈಕೋರ್ಟ್’ಗೆ ಅವರು ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಆರೋಪಿ ಪರ ವಕೀಲರು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್’ಗೆ ಅರ್ಜಿ ಸಲ್ಲಿಸುವ ನಿಟ್ಟಿನಲ್ಲಿ ನ್ಯಾಯಾಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠಕ್ಕೆ ಸಲ್ಲಿಸಿದ್ದ ಈ ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

Join Whatsapp
Exit mobile version