Home ಟಾಪ್ ಸುದ್ದಿಗಳು ಮಂಗಳೂರು ಅನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು ಅನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.


ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್ ಯಾನೆ ದೀಕ್ಷಿತ್ ಅಳಪೆ (32) ಮತ್ತು ಅಳಪೆ ಬಜಾಲ್ ನ ಲಾಯ್ಡ್ ಪಿಂಟೋ (32) ಬಂಧಿತರು.


ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್ ಗೆ ತೆರಳಿದ್ದರು. ಈ ವೇಳೆ ಆರೋಪಿಗಳು ಬೈಕ್ ನಲ್ಲಿ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳನ್ನು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು.

Join Whatsapp
Exit mobile version