Home ಕರಾವಳಿ ಮಂಗಳೂರಿನಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ: ವಿಹಾರಕ್ಕೆ ಬಂದಿದ್ದ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಮಂಗಳೂರಿನಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ: ವಿಹಾರಕ್ಕೆ ಬಂದಿದ್ದ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಸಾಂದರ್ಭಿಕ ಚಿತ್ರ

ಮಂಗಳೂರು: ಉಳ್ಳಾಲದ ಸೋಮೇಶ್ವರ ಬೀಚಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ ತಂಡ ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ.

ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿದ ಸಮಘಪರಿವಾರದ ಕಾರ್ಯಕರ್ತರು ಹಿಂಬಾಲಿಸಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ಸೋಮೇಶ್ವರ ಸಮುದ್ರ ತೀರದಲ್ಲಿ ಉಳ್ಳಾಲ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

Join Whatsapp
Exit mobile version