Home ಟಾಪ್ ಸುದ್ದಿಗಳು ಮೊರ್ಬಿ ದುರಂತ ಟ್ವೀಟ್ ಪ್ರಕರಣ: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಮತ್ತೆ ಬಂಧನ

ಮೊರ್ಬಿ ದುರಂತ ಟ್ವೀಟ್ ಪ್ರಕರಣ: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಮತ್ತೆ ಬಂಧನ

ಗಾಂಧಿನಗರ್: ಗುಜರಾತ್‌ನ ಮೊರ್ಬಿ ಸೇತುವೆ ದುರಂತದ ಕುರಿತು ಟ್ವೀಟ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರಿಗೆ ಅಹಮದಾಬಾದ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದ ಕೆಲವೇ ಕ್ಷಣಗಳಲ್ಲಿ ಮತ್ತೊಂದು ಪ್ರಕರಣದಲ್ಲಿ ಸಾಕೇತ್ ಅವರನ್ನು ಮೊರ್ಬಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಟಿಎಂಸಿ, ಸಾಕೇತ್ ಗೋಖಲೆ ಅವರನ್ನು ಬಿಡುಗಡೆ ಮಾಡಿದ ಕೆಲವೇ ಹೊತ್ತಿನಲ್ಲಿ ಯಾವುದೇ ಕಾರಣವಿಲ್ಲದೆ ಮತ್ತೆ ಬಂಧಿಸಲಾಗಿದೆ. ದೇಶದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳು ಅಪಾಯದಲ್ಲಿದ್ದು, ಗೋಖಲೆ ಬಿಡುಗಡೆಗೆ ಒತ್ತಾಯಿಸುತ್ತೇವೆ ಎಂದು ಹೇಳಿದೆ.


ಮೊರ್ಬಿ ತೂಗು ಸೇತುವೆ ದುರಂತದಲ್ಲಿ ಬದುಕುಳಿದವರನ್ನು ಪ್ರಧಾನಿ ಮೋದಿ ಭೇಟಿಯಾಗಲು 30 ಕೋಟಿ ವ್ಯಯಿಸಲಾಗಿದೆ ಎಂದು ಟ್ವೀಟ್ ಮಾಡಿದ್ದ ಆರೋಪದ ಮೇಲೆ ಸಾಕೇತ್ ಅವರನ್ನು ಡಿಸೆಂಬರ್ 6ರಂದು ಬಂಧಿಸಲಾಗಿತ್ತು. ಆದರೆ ಅವರು ಟ್ವೀಟ್ ಮಾಡಿದ ಮಾಹಿತಿ ತಪ್ಪು ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.


ಇದೀಗ ಗುಜರಾತ್‌ಗೆ ಮೂವರು ಸದಸ್ಯರ ನಿಯೋಗವನ್ನು ಕಳುಹಿಸಲು ಟಿಎಂಸಿ ನಿರ್ಧರಿಸಿದೆ.

Join Whatsapp
Exit mobile version