ಬೆಂಗಳೂರು: ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಂಟೆ ಹೊಡೆಯುವಾಗ ಹೆಚ್ಚಿನ ಶಬ್ದ ಬರುತ್ತಿದೆ ಎಂಬ ಕಾರಣಕ್ಕೆ ಪೊಲೀಸರು ನೋಟೀಸ್ ನೀಡಿದ್ದಾರೆ.
ಬಸವನಗುಡಿ ಪೊಲೀಸ್ ಠಾಣೆಯಿಂದ ದೊಡ್ಡ ಗಣಪತಿ ದೇವಸ್ಥಾನ ಸಮೂಹಕ್ಕೆ ನೋಟಿಸ್ ನೀಡಲಾಗಿದೆ. ಪೊಲೀಸ್ ನೋಟಿಸ್ ಹಿನ್ನೆಲೆಯಲ್ಲಿ ಹೆಚ್ಚಿನ ಶಬ್ದದ ಗಂಟೆ ಹೊಡೆಯದಂತೆ ಬಸವನಗುಡಿಯ ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿಯವರು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸೂಚನೆಯ ಹೊರತಾಗಿಯೂ ಹೆಚ್ಚಿನ ಶಬ್ದ ಬರುವಂತೆ ಗಂಟೆ ಹೊಡೆದಲ್ಲಿ ಪ್ರಕರಣ ದಾಖಲು ಮಾಡುವುದಾಗಿ ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ. ಢಮರುಗ, ಧ್ವನಿ ವರ್ಧಕ ಯಂತ್ರಗಳಿಂದ ಧ್ವನಿ ಹೊರಡಿಸಬಾರದು. ಹೆಚ್ಚಿನ ಶಬ್ದ ಕೇಳಿಬಂದಲ್ಲಿ Noise Pollution (regulation and control rules amended 2000 farmed under the Environment Pollution act 1986 ಅಡಿಯಲ್ಲಿ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ.
ಸಮೂಹ ದೇವಸ್ಥಾನಗಳೆಂದರೆ ದೊಡ್ಡ ಗಣೇಶ ದೇವಸ್ಥಾನ ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನ, ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ದೊಡ್ಡ ಬಸವಣ್ಣ ದೇವಸ್ಥಾನ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಇನ್ನಿತರ ದೇವಸ್ಥಾನಗಳು ಇದರಡಿ ಬರಲಿದೆ.