ಪಶ್ಚಿಮ ಬಂಗಾಳ ಕರಾವಳಿಯ 1 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ

Prasthutha|

ಕೋಲ್ಕತ್ತಾ: ರೀಮಲ್ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಇಂದು ಮಧ್ಯರಾತ್ರಿ ಪಶ್ಚಿಮ ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯಲ್ಲಿರುವ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

- Advertisement -

ಕೆಲವಡೆ ಈಗಾಗಲೇ ವೇಗದ ಗಾಳಿಯೊಂದಿಗೆ ಮಳೆ ಆರಂಭವಾಗಿದೆ. ಸಾಗರ ದ್ವೀಪದಿಂದ ದಕ್ಷಿಣ-ಆಗ್ನೇಯಕ್ಕೆ 160 ಕಿಮೀ ದೂರದಲ್ಲಿ ರೀಮಲ್​ ಚಂಡಮಾರುತ ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಮೊಂಗ್ಲಾ ಬಂದರು ಸಮೀಪದ ಖೇಪುರ ನಡುವೆ ಇಂದು ಮಧ್ಯರಾತ್ರಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ 3 ಗಂಟೆಯ ವೇಳೆಗೆ ಕರಾವಳಿ ಮತ್ತು ತಗ್ಗು ಪ್ರದೇಶಗಳಿಂದ ಸುಮಾರು 1.10 ಲಕ್ಷ ಜನರನ್ನು ಪಶ್ಚಿಮ ಬಂಗಾಳ ಸರ್ಕಾರ ಸ್ಥಳಾಂತರಿಸಿದೆ. ಅವರನ್ನು ಆಶ್ರಯ ತಾಣಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ಸ್ಥಳಾಂತರಿಸಲಾಗಿದೆ. ‘ರಾಜ್ಯ ಸರ್ಕಾರವು ಅಂದಾಜು 5.4 ಲಕ್ಷ ಟಾರ್ಪಾಲಿನ್‌ಗಳನ್ನು ವಿತರಿಸಿದೆ. ಆಹಾರ ಧಾನ್ಯಗಳ ಪೊಟ್ಟಣ, ಹಾಲಿನ ಪುಡಿ, ಕುಡಿಯುವ ನೀರಿನ ಪೊಟ್ಟಣಗಳು ಈ ಪ್ರದೇಶದಲ್ಲಿ ಅಗತ್ಯ ಪ್ರಮಾಣದಲ್ಲಿ ಲಭ್ಯವಿರುವಂತೆ ಖಾತರಿಪಡಿಸಲಾಗಿದೆ.

- Advertisement -

ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯದ ಸಚಿವಾಲಯದಲ್ಲಿ ಕೇಂದ್ರೀಕೃತ ನಿಯಂತ್ರಣ ಘಟಕವೊಂದನ್ನು ಆರಂಭಿಸಲಾಗಿದೆ.

ರೀಮಲ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಲು ಪ್ರಧಾನಿ ಮೋದಿ ಪರಿಶೀಲನಾ ಸಭೆ ನಡೆಸಿದ್ದಾರೆ.

ಇತ್ತ, ನೆರೆಯ ಬಾಂಗ್ಲಾದೇಶವು ಸಹ ಕರಾವಳಿಯ ಸತ್ಕೀರ ಮತ್ತು ಕಾಕ್ಸ್ ಬಜಾರ್ ಜಿಲ್ಲೆಗಳಿಂದ 8 ಲಕ್ಷ ಜನರನ್ನು ಸ್ಥಳಾಂತರಿಸಿದೆ.

Join Whatsapp
Exit mobile version