ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ‘ಯುವ ಸಮೃದ್ಧಿ ಸಮ್ಮೇಳನ- ಬೃಹತ್ ಉದ್ಯೋಗ ಮೇಳ’ ಯಶಸ್ವಿಯಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಯುವಜನರು ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉದ್ಯೋಗ ಮೇಳಕ್ಕೆ 580 ಉದ್ಯೋಗದಾತರು ಆಗಮಿಸಿ ಒಂದು ಲಕ್ಷ ಉದ್ಯೋಗ ಅವಕಾಶಗಳನ್ನು ಒದಗಿಸಿದ್ದಾರೆ. ಮೇಳಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಯುವಜನರು, ನಿರುದ್ಯೋಗಿಗಳು ನೋಂದಾಯಿಸಿಕೊಂಡಿದ್ದರು. ಇದೊಂದು ಐತಿಹಾಸಿಕ ಉದ್ಯೋಗ ಮೇಳವಾಗಿದ್ದು ಇದೇ ರೀತಿ ಕಲಬುರಗಿ, ಬೆಳಗಾವಿ, ಮೈಸೂರು ಮುಂತಾದ ಕಡೆಗಳಲ್ಲಿ ಪ್ರಾದೇಶಿಕ ಉದ್ಯೋಗ ಮೇಳಗಳನ್ನು ಆಯೋಜಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಕಲಬುರಗಿ, ಬೆಳಗಾವಿ, ಮೈಸೂರು ಮುಂತಾದ ಕಡೆಗಳಲ್ಲಿ ಶೀಘ್ರದಲ್ಲೇ ಪ್ರಾದೇಶಿಕ ಉದ್ಯೋಗ ಮೇಳಗಳನ್ನು ಆಯೋಜಿಸುತ್ತೇವೆ. ಇದು ನಿರಂತರ ಪ್ರಕ್ರಿಯೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.