ಗುಜರಾತ್ ಕರಾವಳಿಯಲ್ಲಿ ಮಗುಚಿ ಬಿದ್ದ 10ಕ್ಕೂ ಹೆಚ್ಚು ದೋಣಿಗಳು| 10 ಮೀನುಗಾರರು ನಾಪತ್ತೆ

Prasthutha: December 2, 2021

ಗುಜರಾತ್: ರಾಜ್ಯದಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಇಲ್ಲಿನ ಸೋಮನಾಥ್ ಜಿಲ್ಲೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ 10ಕ್ಕೂ ಹೆಚ್ಚು ದೋಣಿಗಳು ಮಗುಚಿದ ಪರಿಣಾಮ 10 ಮೀನುಗಾರರು ಕಾಣೆಯಾಗಿದ್ದಾರೆ. ಮಾಹಿತಿಗಳ ಪ್ರಕಾರ ಸುಮಾರು 10-12 ದೋಣಿಗಳು ಮಗುಚಿವೆ ಎಂದು ವರದಿಯಾಗಿದೆ. ಕಾಣೆಯಾದ ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಗುಜರಾತ್ ನಲ್ಲಿ ಕಳೆದ ದಿನದಿಂದ ವಿಪರೀತ ಮಳೆ ಸುರಿಯುತ್ತಿದ್ದು, ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿಯೂ ಉತ್ತಮ ಮಳೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಡಿ.1 ಮತ್ತು 2ರಂದು ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದ ಐಎಂಡಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹೇಳಿತ್ತು

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!