ಅಫ್ಘಾನಿಸ್ತಾನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 100ಕ್ಕೂ ಹೆಚ್ಚು ಸಾವು!

Prasthutha|

ಅಫ್ಘಾನಿಸ್ತಾನ: ಅಫ್ಗಾನಿಸ್ತಾನದ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. ಅಫ್ಘಾನಿಸ್ತಾನದ ಕುಂದುಜ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಬಾಂಬ್ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಆತ್ಮಾಹುತಿ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದು ತಾಲಿಬಾನ್ ಅಫ್ಘಾನಿಸ್ತಾನ ಕೈವಶ ಪಡಿಸಿದ ಬಳಿಕ ನಡೆದ ಭೀಕರ ಆತ್ಮಹತ್ಯಾ ಬಾಂಬ್ ದಾಳಿ ಎನ್ನಲಾಗಿದೆ. ಈವರೆಗೂ ಬಾಂಬ್ ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲವಾದರೂ ಶಿಯಾ ಸಮುದಾಯವನ್ನು ಗುರಿಯಾಗಿಸಿ ಐಸಿಸ್ ಈ ದಾಳಿಯನ್ನು ನಡೆಸಿದೆ ಎನ್ನುವ ಆರೋಪವೂ ಕೇಳಿ ಬಂದಿದೆ.

ಬಾಂಬ್ ದಾಳಿ ಸಂದರ್ಭ ಮಸೀದಿಯಲ್ಲಿದ್ದವರೇ ಹೆಚ್ಚಾಗಿ ಸಾವಿಗೀಡಾಗಿದ್ದಾರೆ ಎಂದು ಕುಂದುಜ್‌ ಪ್ರಾಂತ್ಯದ ಉಪ ಪೊಲೀಸ್ ಮುಖ್ಯಸ್ಥ ಮೊಹಮ್ಮದ್ ಒಬೈದಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಶಿಯಾ ಸಮುದಾಯದ ಸಹೋದರರಿಗೆ ರಕ್ಷಣೆ ಒದಗಿಸುವುದನ್ನು ತಾಲಿಬಾನ್ ಖಾತರಿಪಡಿಸುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.

Join Whatsapp