ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರು ಅಸ್ವಸ್ಥ

Prasthutha|

ಚಿಕ್ಕೋಡಿ: ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.

- Advertisement -

ವಾಂತಿ ಭೇದಿಯಿಂದ ಬಳಲುತ್ತಿದ್ದ ಅವರನ್ನು ವಿವಿಧ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಗ್ರಾಮದಲ್ಲಿ ಸೋಮವಾರ ಪಟೇಲ್ ಬಂಧುಗಳ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಊಟ ಮಾಡಿ ಮನೆಗೆ ವಾಪಸ್​​ ಆಗುತ್ತಿದ್ದಂತೆ ಹಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಇಡೀ ರಾತ್ರಿ ಪರದಾಟ ನಡೆಸಿದ ಬಳಿಕ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Join Whatsapp