100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಘೋಷಣೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಹೇಳಿಕೆಯಷ್ಟು ಮುಂಗಾರು ಮಳೆ ಆಗಿಲ್ಲ. ಇದರಿಂದ ಅನೇಕ ಡ್ಯಾಂಗಳು ಭರ್ತಿಯಾಗದೇ ಬತ್ತಿ ಹೋಗುವ ಸ್ಥಿತಿ ತಲುಪಿದ್ದು, ಅನೇಕ ಜಲಾಶಯಗಳು ನೀರಿಲ್ಲದೇ ಖಾಲಿಯಾಗಿದೆ. ಈ ಹಿನ್ನಲೆ ಜಲಾಶಯದ ನೀರನ್ನೇ ನಂಬಿಕೊಂಡು ಬೆಳೆ ಬೆಳೆಯುತ್ತಿದ್ದ ರೈತರಿಗೆ ನೀರಿನ ಅಭಾವ ಎದುರಾಗಿದ್ದು, ಇತ್ತೀಚೆಗಷ್ಟೇ ಕಾವೇರಿ ಕಣಿವೆ ಭಾಗದ ರೈತರಿಗೆ ಬಿತ್ತನೆ ಮಾಡದಂತೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಮನವಿ ಮಾಡಿದ್ದರು. ಇದೀಗ ರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ ಎಂದಿದ್ದಾರೆ.

- Advertisement -


ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋಡ ಬಿತ್ತನೆ ಬಗ್ಗೆ ಚಿಂತನೆಯಿಲ್ಲ, ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಪ್ರಯೋಜನವಾಗಿರಲಿಲ್ಲ. ಬರಗಾಲ ಎಂದು ಘೋಷಿಸಲು ಮಾರ್ಗಸೂಚಿ ಪಾಲಿಸಬೇಕು. ಆದರೆ, ಕೆಲವು ಮಾರ್ಗಸೂಚಿ ಅಡ್ಡ ಬರುತ್ತಿರುವುದರಿಂದ ಘೋಷಿಸಲಾಗುತ್ತಿಲ್ಲ. ರಾಜ್ಯದಲ್ಲಿ ಬರದ ಬಗ್ಗೆ ನಮಗೆ ಸಂಪೂರ್ಣ ಮಾಹಿತಿಯಿದೆ. ಈಗಾಗಲೇ ಬಿಪಿಎಲ್ ಕಾರ್ಡ್ದಾರರಿಗೆ ತಲಾ 5 ಕೆಜಿ ಅಕ್ಕಿ, 5 ಕೆ.ಜಿ ಅಕ್ಕಿಯ ಹಣ ಕೊಡುತ್ತಿದ್ದೇವೆ. ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ಹಣ ನೀಡುತ್ತಿದ್ದೇವೆ. ಇದೆಲ್ಲವೂ ರೈತರಿಗೆ ಅನುಕೂಲವಾಗುತ್ತಿದೆ ಎಂದರು.



Join Whatsapp