ಶಕ್ತಿ ಯೋಜನೆಗೆ ಬಲ ತುಂಬಲು ಬರಲಿವೆ 1000 ಕ್ಕೂ ಅಧಿಕ ಹೊಸ ಬಸ್’ಗಳು

Prasthutha|

ಬೆಂಗಳೂರು: ಶಕ್ತಿ ಯೋಜನೆಯನ್ನು ಬಲಪಡಿಸುವ ಸಲುವಾಗಿ ಇದೀಗ ಹೊಸದಾಗಿ ಒಂದು ಸಾವಿರಕ್ಕೂ ಅಧಿಕ ಬಸ್ ಗಳ ಖರೀದಿಗೆ ರಾಜ್ಯ ಸರಕಾರ ಮುಂದಾಗಿದೆ.
‘ಶಕ್ತಿ’ ಗ್ಯಾರಂಟಿ ಯೋಜನೆಯಿಂದ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇ.30ರಷ್ಟು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಹೊಸ ಬಸ್ಗಳ ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.

- Advertisement -

KSRTCಯಿಂದ 100 ಕೋಟಿ ರೂ.ವೆಚ್ಚದಲ್ಲಿ 250 ಹೊಸ ಬಸ್ಸುಗಳು, ವಾಯುವ್ಯ ರಾಜ್ಯ ರಸ್ತೆ ಸಾರಿಗೆ ನಿಗಮವು 150 ಕೋಟಿ ರೂ.ವೆಚ್ಚದಲ್ಲಿ 375 ಹೊಸ ಬಸ್ಸುಗಳು, ಎಸಿ ಎಲೆಕ್ಟ್ರಿಕ್ ಬಸ್ಸುಗಳನ್ನು 150 ಕೋಟಿ ರೂ.ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ ಎಂದು ಗುರುವಾರ ಸಚಿವ ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಎಚ್.ಕೆ.ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದರು.


ಫಲಾನುಭವಿಗಳು ಸೇವಾ ಕೇಂದ್ರಗಳ ಮೂಲಕ ಅರ್ಜಿ ಪಡೆದು ‘ಶಕ್ತಿ’ ಸ್ಮಾರ್ಟ್ ಕಾರ್ಡ್ ವಿತರಿಸಲು 6 ತಿಂಗಳವರೆಗೆ ಕಾಲಾವಧಿ ವಿಸ್ತರಿಸಲಾಗಿದೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಫಲಾನುಭವಿಗೆ 14 ರೂ. 16 ಪೈಸೆಯನ್ನು ಸೇವಾ ಶುಲ್ಕವಾಗಿ ನಿಗದಿಪಡಿಸಲಾಗಿದೆ.

Join Whatsapp