ಇಂದು ದ.ಕ., ಉಡುಪಿ ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

Prasthutha|

►ಎರಡು ದಿನಗಳ‌ ಕಾಲ ಕರಾವಳಿ ಭಾಗದ ಅಲ್ಲಲ್ಲಿ ಸಾಧಾರಣ ಮಳೆ

- Advertisement -

ಮಂಗಳೂರು: ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.

- Advertisement -

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎರಡು ದಿನಗಳ‌ ಕಾಲ ಕರಾವಳಿ ಭಾಗದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Join Whatsapp