Home ಟಾಪ್ ಸುದ್ದಿಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ : ಮಲ್ಲಿಕಾರ್ಜುನ ಖರ್ಗೆ

ಸರ್ಕಾರದ ವಿವಿಧ ಇಲಾಖೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಸರ್ಕಾರಿ ಇಲಾಖೆಗಳಲ್ಲಿ ಇನ್ನೂ 30 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವಾಲಯ ಸೇವೆ ಕಚೇರಿಗಳಲ್ಲಿ 1,600ರಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಖರ್ಗೆ, ಅದರಲ್ಲಿ  75,000 ಹುದ್ದೆಗಳಷ್ಟೇ ಪ್ರಧಾನಿ ಭರ್ತಿ ಮಾಡಿದ್ದಾರೆ ಎಂದು ಟೀಕಿಸಿದರು.

ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಹಾಗಾದ್ದಲ್ಲಿ ಎಂಟು ವರ್ಷಗಳಲ್ಲಿ 16 ಕೋಟಿ ಹುದ್ದೆ ಸೃಷ್ಟಿಯಾಗಬೇಕಿತ್ತು. ಸರ್ಕಾರದ ವಿವಿಧ ಇಲಾಖೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಪ್ರಧಾನಿ 75,000 ನೇಮಕಾತಿ ಪತ್ರಗಳನ್ನು ಮಾತ್ರ ವಿತರಿಸಿದ್ದಾರೆ ಎಂದು ಖರ್ಗೆ ಹೇಳಿದರು.

Join Whatsapp
Exit mobile version