ಸಿರಿಯಾ, ಟರ್ಕಿಯಲ್ಲಿ ಪ್ರಬಲ ಭೂಕಂಪನ: 375ಕ್ಕೂ ಹೆಚ್ಚು ಮಂದಿ ಸಾವು, ಅಪಾರ ನಷ್ಟ

Prasthutha|

ಡಮಾಸ್ಕಸ್: ಸಿರಿಯಾದಲ್ಲಿ ಸೋಮವಾರ ಬೆಳಗ್ಗೆ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, 237 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 516 ಜನರು ಗಾಯಗೊಂಡಿದ್ದಾರೆ ಎಂದು ಸಿರಿಯಾ ಸರ್ಕಾರಿ ಮಾಧ್ಯಮಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

- Advertisement -


ಟರ್ಕಿಯ ಏಳು ಪ್ರಾಂತ್ಯಗಳಲ್ಲಿಯೂ ಭೂಕಂಪನ ಸಂಭವಿಸಿದ್ದು, ಸುಮಾರು 76 ಜನರು ಸಾವನ್ನಪ್ಪಿದ್ದಾರೆ. ಹಲವು ಕಟ್ಟಡಗಳು ಧ್ವಂಸಗೊಂಡಿದ್ದು, ಹಿಮಬಾಧಿತ ಬೀದಿಗಳಲ್ಲಿ ಅವಶೇಷಗಳ ಅಡಿಯಲ್ಲಿ ಬದುಕುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

440 ಮಂದಿ ಗಾಯಗೊಂಡಿದ್ದಾರೆ ಎಂದು ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ಹಿಂದೆ ಬಂಡುಕೋರರ ಹಿಡಿತದಲ್ಲಿರುವ ಪ್ರದೇಶಗಳಲ್ಲಿ 47 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ಟರ್ಕಿ ಮತ್ತು ಸಿರಿಯಾದಲ್ಲಿ ಒಟ್ಟಾರೆ ಸಾವಿನ ಸಂಖ್ಯೆಯನ್ನು 360 ಕ್ಕೆ ಏರಿದೆ ಎಂದು ಸಂಸ್ಥೆ ತಿಳಿಸಿದೆ.

Join Whatsapp