ಚಿತ್ರದುರ್ಗ: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Prasthutha|

ಚಿತ್ರದುರ್ಗ: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿತ್ರದುರ್ಗ ದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಅಸ್ವಸ್ಥರಾದ ಮಕ್ಕಳನ್ನು ಕೂಡಲೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

- Advertisement -

ಅಸ್ವಸ್ಥ ವಿದ್ಯಾರ್ಥಿಗಳು ಬಹುತೇಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿತ್ರದುರ್ಗ ನಗರ ಠಾಣೆಯ ಸಿಪಿಐ ತಿಪ್ಪೇಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಸಿಯೂಟ ಸೇವನೆ ಬಳಿಕ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದರು. ಇನ್ನು ಮಕ್ಕಳು ಮಧ್ಯಾಹ್ನದ ಬಿಸಿಯೂಟದ ನಂತರ ಸೇಂಗಾ ಚಾಕ್ಲೇಟ್ ಸೇವಿಸಿದ್ದಾರೆ ಎನ್ನಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

ಇಂತಹ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಮಕ್ಕಳ ಮೇಲೆ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ. ಹವದು, ಸೆಪ್ಟಂಬರ್ 06 ರಂದು ದಾವಣಗೆರೆ ತಾಲೂಕಿನ ಮಾಯಕೊಂಡದ ಮೊರಾರ್ಜಿ ಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ್ದ 38ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಕ್ಕೆ ಸೇರಿಸಲಾಗಿತ್ತು. ಬಳಿಕ ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Join Whatsapp