‘ಟೀಕಾಕಾರರನ್ನು ಬಾಯಿ ಮುಚ್ಚಿಸಲು ಇಡಿ ರೈಡ್’: ಹರ್ಷ ಮಂದರ್ ಬೆಂಬಲಕ್ಕೆ ನಿಂತ 600ರಕ್ಕೂ ಅಧಿಕ ಸಾಮಾಜಿಕ ಹೋರಾಟಗಾರರು

Prasthutha|

ಹೊಸದಿಲ್ಲಿ: ಪ್ರಮುಖ ಮಾನವ ಹಕ್ಕುಗಳ ಕಾರ್ಯಕರ್ತ, ಮಾಜಿ ಐಎಎಸ್ ಅಧಿಕಾರಿ ಹಾಗೂ ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದ ಟೀಕಾಕಾರ ಹರ್ಷ ಮಂದರ್ ಅವರ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ(ಇಡಿ)ದ ಕ್ರಮವನ್ನು ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದಾರೆ.

- Advertisement -

ವಕೀಲರು, ಪತ್ರಕರ್ತರು, ಚಲನಚಿತ್ರ ನಿರ್ಮಾಪಕರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿದಂತೆ 600 ಕ್ಕೂ ಅಧಿಕ ಜನರು ಹರ್ಷ ಮಂದರ್ ಜೊತೆ ತಮ್ಮ ಒಗ್ಗಟ್ಟನ್ನು ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಎಲ್ಲ ಟೀಕಾಕಾರರನ್ನು ಬಾಯಿ ಮುಚ್ಚಿಸುವ ಪ್ರಯತ್ನದ ಭಾಗವಾಗಿ ಈಡಿ ಮತ್ತು ಐಟಿ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಹರ್ಷ ಮಂದರ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ಹೇಳಲಾಗಿದೆ.

ಭಾರತದ ಸಂವಿಧಾನ ಮತ್ತು ದೇಶದ ಕಾನೂನು ಚಾಲ್ತಿಯಲ್ಲಿದೆ. ಈ ಬೆದರಿಕೆ ತಂತ್ರಗಳ ಹಿಂದೆ ಯಾವ ಶಕ್ತಿ ಇದೆ ಎಂಬುದು ಬಹಿರಂಗವಾಗಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿ ನಮ್ಮ ಎಲ್ಲ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Join Whatsapp