ಇಟಾನಗರ: ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಮಾರುಕಟ್ಟೆಯೊಂದರಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ ಸುತ್ತ ಮುತ್ತಲಿನ 700ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆಯೊಂದು ನಡೆದಿದೆ.
ಇಟಾನಗರದ ನಗರ್ಲಗುನ್ ಡೈಲಿ ಮಾರುಕಟ್ಟೆಯಲ್ಲಿ ಬೆಳಗ್ಗಿನ ಜಾವದಲ್ಲಿ ಅನಿರೀಕ್ಷಿತವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ವ್ಯಾಪಕಗೊಂಡು 700ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮಗೊಂಡಿದೆ. ಆದರೆ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ದೀಪಾವಳಿಗೆ ಬಳಸುವ ಪಟಾಕಿ ಸಿಡಿ ಮದ್ದುಗಳು ಈ ಬೆಂಕಿ ಉದ್ಭವಗೊಳ್ಳಲು ಕಾರಣ ಎಂದು ಶಂಕಿಸಲಾಗುತ್ತಿದೆ. ಈ ಕುರಿತು ತನಿಖೆ ಪ್ರಗತಿಯಲ್ಲಿದೆ ಎನ್ನಲಾಗಿದೆ.