ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರ ದಿನೇ ದಿನೇ ಉಲ್ಬಣಿಸಿದ್ದು, ಅಲ್ಲಿರುವ 778ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ತಿಳಿಸಿದೆ.
ಈವರೆಗೂ, 778 ಭಾರತೀಯ ವಿದ್ಯಾರ್ಥಿಗಳು ವಿವಿಧ ಭೂ ಸಾರಿಗೆ ಮೂಲಕ ಭಾರತಕ್ಕೆ ಮರಳಿದ್ದಾರೆ. ಜೊತೆಗೆ, ಹೆಚ್ಚುವರಿಯಾಗಿ ಸುಮಾರು 200 ವಿದ್ಯಾರ್ಥಿಗಳು ಢಾಕಾ ಮತ್ತು ಚಿತ್ತಗಾಂಗ್ ವಿಮಾನ ನಿಲ್ದಾಣಗಳಿಂದ ದೇಶಕ್ಕೆ ಮರಳಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.
ಬಾಂಗ್ಲಾದೇಶದಲ್ಲಿ ಸುಮಾರು 15.000 ಭಾರತೀಯ ಪ್ರಜೆಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ.
ಬಾಂಗ್ಲಾದೇಶದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಉಳಿದಿರುವ 4,000 ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಭಾರತೀಯ ಹೈಕಮಿಷನ್ ಮತ್ತು ಸಹಾಯಕ ಹೈಕಮಿಷನ್‌ಗಳು ನಿರಂತವಾಗಿ ಸಂಪರ್ಕದಲ್ಲಿವೆ. ಅವರಿಗೆ ಅಗತ್ಯ ನೆರವು ನೀಡುತ್ತಿವೆ. ಜೊತೆಗೆ ಕೋರಿಕೆಯ ಮೇರೆಗೆ ನೇಪಾಳ ಮತ್ತು ಭೂತಾನ್‌ನ ವಿದ್ಯಾರ್ಥಿಗಳಿಗೆ ಭಾರತದ ಗಿಡ ದಾಟಲು ಸಹಾಯ ಮಾಡಲಾಗಿದೆ ಎಂದು ಸಚಿವಾಲಯ ಹೇಳಿದೆ.