ಕಲಬುರಗಿ: ಹೆತ್ತ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

Prasthutha|

ಕಲಬುರಗಿ: ಹೆತ್ತ ಮಗಳನ್ನು ಕೊಲೆ ಮಾಡಿ, ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -


ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ತಾಯಿ ಶಿವಲೀಲಾ (23), ಮಗಳಾದ ವರ್ಷಿತಾ (2) ಮೃತರು.


ತಾಯಿ ಶಿವಲೀಲಾ ಚಿಂಚೋಳಿ ತಾಲೂಕಿನ ಕೆರೋಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಕಳೆದ ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಎಂಬವರ ಜೊತೆ ವಿವಾಹವಾಗಿದ್ದರು. ಮದುವೆಯಾದ ಬಳಿಕ ಶಿವಲೀಲಾ ಗಂಡನ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ತವರು ಮನೆಗೆ ಬಂದಿದ್ದರು. ಎರಡು ದಿನಗಳ ಹಿಂದಷ್ಟೇ ಶಿವಲೀಲಾ ಮತ್ತೆ ಗಂಡನ ಮನೆಗೆ ತೆರಳಿದ್ದು, ಮಗುವನ್ನೂ ಕೊಂದು ತಾನೂ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp