ಕೊಟ್ಟ ಸಾಲ ಕೇಳಿದ್ದಕ್ಕೆ ಅಪಪ್ರಚಾರ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ !

Prasthutha: January 15, 2022

ಶಿವಮೊಗ್ಗ: ಕೊಟ್ಟ ಸಾಲದ ಹಣ ಮರಳಿಸುವಂತೆ ಕೇಳಿದ್ದಕ್ಕೆ ಸಾಲ ಪಡೆದವರು ಅಕ್ರಮ ಸಂಬಂಧದ ಪಟ್ಟ ಕಟ್ಟಿದ್ದರು. ಇದರಿಂದ ಮನನೊಂದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಭದ್ರಾವತಿ ತಾಲೂಕಿನ ಯಡೇಹಳ್ಳಿಯ ನಿವಾಸಿ ವೀಣಾ , 7 ವರ್ಷದ ಮಗಳಾದ ಜ್ಞಾನವಿ ಹಾಗೂ ಒಂದು ವರ್ಷದ ದೈವಿಕಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ವೀಣಾ ಹಾಗೂ ಸಂತೋಷ್ ದಂಪತಿಯು ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂ. ಸಾಲ ನೀಡಿದ್ದರು. ಈ ಸಾಲ ವಾಪಸ್ ನೀಡುವಂತೆ ಕೇಳಿದ್ದಕ್ಕೆ ಆಶಾ ಹಾಗೂ ಸಂತೋಷ್ ದಂಪತಿಯು ವೀಣಾ ಅಕ್ರಮ‌ ಸಂಬಂಧ ಹೊಂದಿದ್ದಾರೆ ಎಂದು ಅಪಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ.

ಹೀಗೆ ಅಪಪ್ರಚಾರ ಮಾಡದಂತೆ ಕೇಳಿಕೊಂಡರೂ‌ ಆಶಾ ದಂಪತಿ ಅದನ್ನೇ ಮುಂದುವರೆಸಿದ್ದಾರೆ. ಇದರಿಂದ ಮನನೊಂದು ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮೃತ ವೀಣಾ ಪತಿ ಸಂತೋಷ್ ನೀಡಿದ ದೂರಿನ ಮೇರೆಗೆ ಅರಹತೋಳಲು ಗ್ರಾಮದ ಸಂತೋಷ್(35) ನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಆದರೆ ಆಶಾ ಪರಾರಿಯಾಗಿದ್ದಾಳೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!