ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ತಾಯಿ, ಮಗಳು ಸಜೀವ ದಹನ

Prasthutha|

ಬಾಗಲಕೋಟೆ: ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ.

- Advertisement -

ಜೈಬಾನ್ (55), ಶಬಾನ್ (25) ಮೃತರು. ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದು, ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ದಸ್ತಗೀರಸಾಬ್, ಸುಬಾನ್ ಹಾಗೂ ಸಿದ್ದಿಕಿ ಎಂಬವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿದ್ದಾರೆ‌.



Join Whatsapp
Exit mobile version