ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

Prasthutha|

ಕಲಬುರಗಿ: ತಾಯಿ ಮತ್ತು ಮಗಳು ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡವರು.


ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ.

- Advertisement -


ಇವರಿಬ್ಬರು ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ-ಮಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಈ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp