ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ತಾಯಿ ಹಾಗೂ ಮಗಳು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆಯಲ್ಲಿ ನಡೆದಿದೆ.
ಶೋಭ (40), ವರ್ಷ (8) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ತಾಯಿ – ಮಗಳು ನೀರಿನ ಪ್ರಮಾಣ ಕಡಿಮೆ ಇರುವ ಕಡೆ ಕೆರೆ ದಾಟುತ್ತಿದ್ದರು. ಮಗಳು ನೀರಿನ ಪ್ರಮಾಣ ಹೆಚ್ಚಿರುವ ಕಡೆ ಹೋಗಿ ಸಿಲುಕಿಕೊಂಡಾಗ ತಾಯಿ ಶೋಭ ರಕ್ಷಣೆಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ನೀರುಪಾಲಾಗಿದ್ದಾರೆ.