ನೆಲಮಂಗಲ : ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆ ಪರಿಣಾಮ ಉಸಿರುಗಟ್ಟಿ ತಾಯಿ ಮತ್ತು ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಸಂಭವಿಸಿದೆ.
ಮಂಗಳ(35) ಮತ್ತು ಗೌತಮಿ(07) ಮೃತಪಟ್ಟರು ಎಂದು ಗುರುತಿಸಲಾಗಿದೆ.
ಗಂಡ ನರಸಿಂಹಮೂರ್ತಿ ಕೆಲಸಕ್ಕೆ ತೆರಳಿದ ಸಮಯದಲ್ಲಿ ತಾಯಿ-ಮಗಳು ಸ್ನಾನಕ್ಕೆಂದು ತೆರಳಿದಾಗ ಈ ದುರ್ಘಟನೆ ಸಂಭವಿಸಿದೆ. ಮನೆ ಮಾಲೀಕರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತು ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.