ಬೆಳಗಾವಿ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ನಿಧನ

Prasthutha|

ಬೆಳಗಾವಿ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಹಂಪಿಹೊಳಿ ಗ್ರಾಮದಲ್ಲಿ ನಡೆದಿದೆ.

- Advertisement -

ರುದ್ರವ್ವ ತಳವಾರ (70) ಸಾವನ್ನಪ್ಪಿದವರು. ಹಣ್ಣಿನ ವ್ಯಾಪಾರಿಯಾಗಿದ್ದ ಬಾಳಪ್ಪ ತಳವಾರ (50) ಮರದಿಂದ ಬಿದ್ದು ಸಾವನ್ನಪ್ಪಿದ್ದರು.

ಬಾಳಪ್ಪ ತಳವಾರ ಅವರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ಎಂದಿನಂತೆ ಹಣ್ಣು ಕೀಳಲೆಂದು ನೇರಳೆ ಮರಕ್ಕೆ ಹತ್ತಿದ್ದಾರೆ. ಈ ವೇಳೆ ಆಯತಪ್ಪಿ ಮರದ ಮೇಲಿಂದ ಬಿದ್ದು ಬಾಳಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ಈ ಸುದ್ದಿ ತಿಳಿದ ಬಾಳಪ್ಪ ಅವರ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಬಡಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

Join Whatsapp