ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ!

Prasthutha|

ದಾವಣಗೆರೆ: ಐದು ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

- Advertisement -


ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಈ ಘಟನೆ ನಡೆದಿದೆ. ಕವಿತಾ (27) ಹಾಗೂ ನಿಹಾರಿಕಾ (05) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು ಎಂದು ಗುರುತಿಸಲಾಗಿದೆ.


ಕಳೆದ ಶುಕ್ರವಾರ ಮಗಳು ನಿಹಾರಿಕಾಳೊಂದಿಗೆ ಕವಿತಾ ಕಾಣೆಯಾಗಿದ್ದಳು. ಈ ಬಗ್ಗೆ ಪತಿ ಮಂಜುನಾಥ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಇಂದು ಸೂಳೆಕೆರೆಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿದೆ. ಸೂಳೆಕೆರೆಗೆ ಹಾರುವ ಮುನ್ನ ಮಗಳನ್ನ ವೇಲ್ ನಿಂದ ಕಟ್ಟಿಕೊಂಡು ಕವಿತಾ ಕೆರೆಗೆ ಹಾರಿದ್ದಾರೆ.



Join Whatsapp