ಮಗನ ಕೊಂದು ಆತ್ಮಹತ್ಯೆಗೈದ ತಾಯಿ

Prasthutha|

ಬೆಂಗಳೂರು:  ಮಗನನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊಸಗುಡ್ಡದ ಹಳ್ಳಿಯಲ್ಲಿ ಇಂದು ಮುಂಜಾನೆ ನಡೆದಿದೆ.

- Advertisement -

ಹೊಸಗುಡ್ಡದ ಹಳ್ಳಿಯ 13 ವರ್ಷದ ಮಗ ಮದನ್‌ ಗೆ ನೇಣು ಬಿಗಿದ ಬಳಿಕ  ತಾಯಿ 48 ವರ್ಷದ ಲಕ್ಷ್ಮಮ್ಮ ಅವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

- Advertisement -

ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ತನಿಖೆಯಿಂದಷ್ಟೇ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



Join Whatsapp