ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ: ಪತಿ ನಾಪತ್ತೆ

Prasthutha|

ಚಿಕ್ಕಬಳ್ಳಾಪುರ: ಮೂರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದು ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಾಸ್ಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ನಡೆದಿದೆ.

- Advertisement -


ಸುಧಾರಾಣಿ (32) ಮಗಳು ಸಾನ್ವಿಯ (3) ಮೃತರು.


ಸುಧಾರಾಣಿ ಹಾಗೂ ರವಿ ದಂಪತಿ ಆಗಾಗ ಕೌಟುಂಬಿಕ ವಿಚಾರವಾಗಿ ಜಗಳ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಗಂಡನ ಮೇಲಿನ ಕೋಪಕ್ಕೆ ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Join Whatsapp