Home ಟಾಪ್ ಸುದ್ದಿಗಳು ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ: ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮಗಳಿಗೆ ಗಂಭೀರ ಗಾಯ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ: ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮಗಳಿಗೆ ಗಂಭೀರ ಗಾಯ

ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕೂಟರನ್ನು ಬಸ್ ಗೆ ಗುದ್ದಿರುವ ಪರಿಣಾಮ ಅಮ್ಮ-ಮಗಳು ಗಂಭೀರ ಗಾಯಗೊಂಡಿರುವ ಘಟನೆ ಸುಜಾತ ಥಿಯೇಟರ್ ಬಳಿ ಸಂಭವಿಸಿದೆ.

ವಸಂತನಗರದ ನಿವಾಸಿ ಉಮಾ (42) ಮತ್ತು ಆಕೆಯ ಮಗಳು ವನಿತಾ (22) ಗಾಯಗೊಂಡವರು. ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಲಭಾಗಕ್ಕೆ ಸ್ಕೂಟರ್ ಚಲಾಯಿಸಿದ್ದರಿಂದ ಅದು ಹಿಂಬದಿಯಿಂದ ಬರುತ್ತಿದ್ದ ಬಸ್ ಗೆ ಗುದ್ದಿದೆ. ಇಬ್ಬರೂ ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಉಮಾ ಅವರ ಸ್ಥಿತಿ ಚಿಂತಾಜನಕವಾಗಿದೆ.

ಘಟನೆ ಸಂಬಂಧ ಮಲ್ಲೇಶ್ವರ ಸಂಚಾರ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Join Whatsapp
Exit mobile version