March 7, 2021

ಪ್ರಚೋದನಕಾರಿ ಭಾಷಣಗಳ ಸರದಾರ ಸಂಸದ ಅನಂತ್ ಕುಮಾರ್ ಹೆಗಡೆ ಆರೋಗ್ಯದಲ್ಲಿ ಏರುಪೇರು, ಶಸ್ತ್ರ ಚಿಕಿತ್ಸೆ

ರಾಜಕೀಯಕ್ಕೆ ಗುಡ್ ಬೈ ?

ಬೆಂಗಳೂರು : ತಮ್ಮ ಪ್ರಚೋದನಕಾರಿ ಭಾಷಣಗಳಿಂದಲೇ ಸುದ್ದಿಯಲ್ಲಿದ್ದ ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆಯವರು ರಾಜಕೀಯಕ್ಕೆ ವಿದಾಯ ಹೇಳಲು ಮುಂದಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅನಂತ್ ಕುಮಾರ್ ಹೆಗಡೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರು ತೀವ್ರವಾದ ಬೆನ್ನು ನೋವು ಹಾಗೂ ಕಾಲುನೋವಿನ ಶಸ್ತ್ರಕ್ರಿಯೆಗೆ ಒಳಗಾಗಿದ್ದರಿಂದ ಅವರಿಗೆ ಹೆಚ್ಚಿನ ಸಮಯ ವಿಶ್ರಾಂತಿ ಬೇಕು ಎನ್ನಲಾಗಿದೆ.

ಬೆನ್ನುನೋವು ಮತ್ತು ಕಾಲು ನೋವು ಉಲ್ಬಣವಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ವಿಶ್ರಾಂತಿಯಲ್ಲಿರುವ ಅವರು ರಾಜಕೀಯ ನಿವೃತ್ತಿ ಹೊಂದುವ ಚಿಂತನೆಯಲ್ಲಿದ್ದಾರೆ ಎಂದು ಹೇಳಲಾಗಿದೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!