ನವದೆಹಲಿ: ಬಹುಜನ ಸಮಾಜ ಪಕ್ಷದ (BSP) ಮುಖಂಡ ಹಾಗೂ ಅಮ್ರೋಹಾದ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಪಕ್ಷದಿಂದ ಅಮಾನತುಗೊಂಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಮಾಯಾವತಿ ಪಕ್ಷದ ಹೇಳಿಕೆ ಬಿಡುಗಡೆ ಮಾಡಿದ್ದು, ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಬಿಎಸ್ ಪಿ ಅವರನ್ನು ಇಂದು 9.12.2023 ರಂದು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ನಿಮಗೆ ತಿಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.