ಮೃತ ವ್ಯಕ್ತಿಯ ಹೆಸರಿಗೆ ಬಂದ ಕೋವಿಡ್ ಲಸಿಕೆ ಪ್ರಮಾಣಪತ್ರ!

Prasthutha: December 11, 2021

ಮೇ ತಿಂಗಳಲ್ಲಿ ನಿಧನರಾದ ವ್ಯಕ್ತಿಗೆ ಡಿಸೆಂಬರ್ ನಲ್ಲಿ ವ್ಯಾಕ್ಸಿನೇಶನ್ ಮೆಸೇಜ್!

ಭೋಪಾಲ: ಮಧ್ಯಪ್ರದೇಶದ ರಾಯ್‌ ಗಢದಲ್ಲಿ ಮೃತ ವ್ಯಕ್ತಿಯ ಹೆಸರಿನಲ್ಲಿ ಕೋವಿಡ್ ಲಸಿಕೆಯ ಪ್ರಮಾಣಪತ್ರ ಬಂದಿರುವ ಘಟನೆ ವರದಿಯಾಗಿದೆ.

ಬಿಯೋರಾ ಪಟ್ಟಣದ ಪುರುಷೋತ್ತಮ ಶಕ್ಯಾವರ್ (78) ಎಂಬವರು ಮೇ ತಿಂಗಳಲ್ಲಿ ನಿಧನರಾಗಿದ್ದರು.
ವ್ಯಕ್ತಿ ಸಾವಿಗೀಡಾಗಿರುವ ಹಲವು ತಿಂಗಳುಗಳ ಬಳಿಕ ಕೋವಿಡ್ ಲಸಿಕೆಯ ಎರಡನೇ ಡೋಸ್ ಹಾಕಿಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಮೊಬೈಲ್ ಸಂದೇಶ ಲಭ್ಯವಾಗಿದೆ.

ತಾಂತ್ರಿಕ ದೋಷದಿಂದಾಗಿ ಹೀಗೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಈ ಲೋಪದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಕೋವಿಡ್ ಲಸಿಕೆ ಅಧಿಕಾರಿ ಡಾ. ಪಿ.ಎಲ್. ಭಗೋರಿಯ ತಿಳಿಸಿದ್ದಾರೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!