ಈರೋಡ್: ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಲೋಕಸಭಾ ಸಂಸದ ಡಿಎಂಕೆಯ ಎ.ಗಣೇಶಮೂರ್ತಿ ಅವರು ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
2019 ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಟಿಕೆಟ್‌ನಲ್ಲಿ ಚುನಾಯಿತರಾದ ಗಣೇಶಮೂರ್ತಿ ಆರೋಗ್ಯ ಏಕಾಏಕಿ ಹದಗಟ್ಟಿತ್ತು, ಬಳಿಕ ಆಸ್ಪತ್ರೆಗೆ ದಾಖಲಿಸಿದಾಗ ಅವರು ಕೀಟನಾಶಕ ಸೇವಿಸಿದ್ದು ತಿಳಿದುಬಂದಿದೆ. ತಪಾಸಣೆಯ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರ ಈ ನಿರ್ಧಾರಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ.