ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ – ಸಂಸದ ನಳಿನ್ ಸೂಚನೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.

- Advertisement -

ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಷ್ಠಾನ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಡ್ಡಹೊಳೆ-ಪೆರಿಯಶಾಂತಿ, ಪೆರಿಯಶಾಂತಿ-ಬಂಟ್ವಾಳ ಹಾಗೂ ಸನ್ನೂರು-ಬಿಕರ್ನಕಟ್ಟೆ ವ್ಯಾಪ್ತಿಯ ರಸ್ತೆ ನಿರ್ಮಾಣ ಯೋಜನೆಗಳನ್ನು ಕೈಗೊಳ್ಳಲಾಗಿದ್ದು ಈ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅರ್ಪಿಸಬೇಕು ಎಂದರು.

- Advertisement -

ಈ ಕುರಿತು ನಿರಂತರ ಸಭೆ ನಡೆಸಿ ಯೋಜನೆ ಅನುಷ್ಠಾನದಲ್ಲಿ ಆದ ಪ್ರಗತಿಯ ಕುರಿತು ಚರ್ಚಿಸಬೇಕು. ಈ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ತಿರುವು ರಸ್ತೆಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶು ಮೋಹನ್, ಯೋಜನಾ ನಿರ್ದೇಶಕ ದೀಪಕ್ ಕುಮಾರ್, ಎಸ್.ಎಂ. ಔತಾಡೆ ನಿರ್ಮಾಣ ಕಂಪನಿಯ ಯೋಜನಾ ನಿರ್ದೇಶಕ ಮಹೇಂದ್ರ ರೆಡ್ಡಿ, ದಿಲೀಪ್ ಬಿಲ್ಡರ್ಸ್‍ನ ರತ್ನಾಕರ ಸಭೆಯಲ್ಲಿದ್ದರು.

Join Whatsapp