ಮಂಗಳೂರು: ಪ್ರವೀಣ್ ನೆಟ್ಟಾರು ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ನೀವು ಉದ್ಯೋಗ ನೀಡದಿದ್ದರೂ ಕೇಂದ್ರದ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ‘ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ದರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ, ಈ ಬಗ್ಗೆ ಕೂಡ ದುಃಖ ಇದೆ ಎಂದಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಮಾಡಲಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗಿದೆ. ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ ಹತ್ಯೆ ಮಾಡುತ್ತಿದೆ ಎಂದು ಹೇಳಿದ್ದಾರೆ.