ಚಿತ್ರದುರ್ಗ: ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ ಸಹೋದರ ಡಾ.ಎಂ.ಪಿ.ದಾರಕೇಶ್ವರಯ್ಯ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ರೇಣುಕಾಚಾರ್ಯ ಸಹೋದರ ಸಲ್ಲಿಸಿದ ನಾಮಪತ್ರ ಸ್ವೀಕೃತಗೊಂಡಿದೆ.
ಚಿತ್ರದುರ್ಗದಲ್ಲಿ ಸುದೀರ್ಘ ಅವಧಿಗೆ ವೈದ್ಯನಾಗಿ ಸೇವೆ ಸಲ್ಲಿಸಿದ್ದೇನೆ. ಗ್ರಾಮೀಣ ಪ್ರದೇಶದ ಜನರು ನನ್ನ ಮೇಲೆ ಅಪಾರವಾದ ವಿಶ್ವಾಸ ಇಟ್ಟಿದ್ದಾರೆ. ಜನರ ಅಪೇಕ್ಷೆಯ ಮೇರೆಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ದಾರಕೇಶ್ವರ ಹೇಳಿದ್ದಾರೆ.
ಬೇಡ ಜಂಗಮ 2012ರಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದು, ಈವರೆಗೆ ನಾಲ್ಕು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದು ದಾರಕೇಶ್ವರಯ್ಯ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.