ಮಧ್ಯಪ್ರದೇಶ: ರಸ್ತೆ ಬದಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್| 6 ಮಂದಿ ಮೃತ್ಯು

Prasthutha|

ರತ್ಲಾಂ: ರಸ್ತೆ ಬದಿಯಲ್ಲಿ ನಿಂತು ಬಸ್ ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದು ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಈ ಅಪಘಾತದಲ್ಲಿ 10 ಮಂದಿ ಗಾಯಗೊಂಡಿದ್ದು, 8 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಕ್ರ ಸ್ಫೋಟಗೊಂಡಾಗ ಚಾಲಕನು ನಿಯಂತ್ರಣವನ್ನು ಕಳೆದುಕೊಂಡಿರುವುದರಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

- Advertisement -

ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

Join Whatsapp