ಭಾರತ್ ಮಾತಾ ಕಿ ಜೈ ಘೋಷಣೆ ವಿವಾದ: ವಿದ್ಯಾರ್ಥಿ, ಶಿಕ್ಷಕನಿಗೆ ಗಂಭೀರ ಹಲ್ಲೆ

Prasthutha|

ಭೋಪಾಲ್: ಮಧ್ಯಪ್ರದೇಶದ ಅಗರ್ ಮಾಲ್ವಾ ಎಂಬಲ್ಲಿನ ಶಾಲೆಯಲ್ಲಿ ಭಾರತ ಮಾತ ಕೀ ಜೈ ಘೋಷಣೆ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕನಿಗೆ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ರಾಜ್ಯದ ರಾಜಧಾನಿ ಭೋಪಾಲ್ ನಿಂದ ಸುಮಾರು 175 ಕಿ.ಮೀ ದೂರದ ಬರೋಡ್ ನಲ್ಲಿ ಈ ಘಟನೆ ನಡೆಸಿದ್ದು, ಈ ಸಂಬಂಧ 20 ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹಿಂದೂ ಮತ್ತು ಮುಸ್ಲಿಮ್ ಸೇರಿದಂತೆ ವಿವಿಧ ಸಮುದಾಯಗಳ ವಿದ್ಯಾರ್ಥಿಗಳು ಖಾಸಗಿ ಶಾಲೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ ಎಂದು ಮಾಲ್ವಾ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಾಗರ್ ಬುಧವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.

- Advertisement -

ಶಾಲೆಯಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಸ್ವಲ್ಪ ವಿವಾದವಿತ್ತು. ಈ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಹೊರಗಿನಿಂದ ಜನರನ್ನು ಕರೆಸಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಶಾಲೆಯಲ್ಲಿ ಕೆಲವು ಮುಸ್ಲಿಮ್ ವಿದ್ಯಾರ್ಥಿಗಳು ಭಾರತ್ ಮಾತಾ ಕಿ ಜೈ ಘೋಷಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಭರತ್ ಸಿಂಗ್ ರಜಪೂತ್ ತಿಳಿಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್, ಎಸ್.ಟಿ/ಎಸ್.ಸಿ ಕಾಯ್ದೆ ಅಡಿಯಲ್ಲಿ ಗಲಭೆ ಮತ್ತು ಹಲ್ಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಕೆಲವರನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp