ಹನುಮಾನ್ ಚಾಲೀಸ್ ರ್‍ಯಾಲಿ: ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು: ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿಕೊಂಡು ರ್‍ಯಾಲಿ ಮಾಡುತ್ತಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆಯೇ ಕಾರಣವೆಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ನಗರ್ತಪೇಟೆಯಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸ್ಥಳೀಯರ ಪ್ರತಿಭಟನೆಗೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆ ನೀಡಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾನೂನು ಘಟಕದಿಂದ ದೂರು ನೀಡಲಾಗಿದೆ. ಪ್ರತಿಭಟನಾ ಸ್ಥಳಕ್ಕೆ ಬಂದ ಸಂಸದ ತೇಜಸ್ವಿ ಸೂರ್ಯನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.



Join Whatsapp