ದೈವಾರಾಧನೆಗೆ ಸಂಸದ ತೇಜಸ್ವಿ ಸೂರ್ಯ ಅವಮಾನ ಆರೋಪ: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ

Prasthutha|

ಬೆಂಗಳೂರು: ದೈವಾರಾಧನೆಗೆ ಸಂಸದ ತೇಜಸ್ವಿ ಸೂರ್ಯ ಅವರು ಅವಮಾನ ಮಾಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -


ಭಾನುವಾರ ಬೆಂಗಳೂರಿನಲ್ಲಿ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವಾರಾಧನೆಯ ಕಾರ್ಯಕ್ರಮವಿತ್ತು. ಇದರಲ್ಲಿ ತೇಜಸ್ವಿ ಅವರು ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್ ಕೊಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ.


ಸದ್ಯ ಈ ಫೋಟೊವನ್ನು ಸಾಮಾಜಿಕ ಜಾಲತಾಣದಿಂದ ಸಂಸದ ತೇಜಸ್ವಿ ಸೂರ್ಯ ಅವರು ಡಿಲೀಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp