ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಟ್ಟರೆ ಮಠದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭಾವಚಿತ್ರ ಹಾಕಿ ಖಾಯಂ ಗೌರವ ನೀಡುವುದಾಗಿ, ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಕೆಲವು ಸಮುದಾಯದವರು ವಿರೋಧ ಮಾಡುತ್ತಿದ್ದಾರೆ ಎನ್ನುವುದು ಸುಳ್ಳು. ಯಾರೂ ವಿರೋಧ ಮಾಡುತ್ತಿಲ್ಲ. ನಮ್ಮಲ್ಲೇ ಇರುವಂತ ಹೊಟ್ಟೆಕಿಚ್ಚಿನಿಂದ ಹೀಗೆ ಮಾತನಾಡಲಾಗುತ್ತಿದೆ ಎಂದರು.
ಕೆಲವರು ಸಿಎಂ ಬಳಿಗೆ ಹೋಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಬೇಡಿ ಎಂದು ಪಿತೂರಿ ನಡೆಸಿದ್ದಾರೆ ಎಂದು ಹೇಳುವ ಮೂಲಕ, ಪರೋಕ್ಷವಾಗಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.