ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕಾಂಗ್ರೆಸ್ ನಾಯಕ ಕೋಳಿವಾಡ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಆರೋಪ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ನೀಡಿದೆ. ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ ಪದೇಪದೆ ಮಾತನಾಡಿದ್ದೂ ಕೂಡ ಸಾಕಷ್ಟು ಎಫೆಕ್ಟ್ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದರು.

- Advertisement -


ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದರು.


ಮೋದಿ ಹರಿಯಾಣದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಕರ್ನಾಟಕದ ವಿಚಾರ ಪ್ರಚಾರ ಮಾಡ್ತಾರೆ. ಆದ್ದರಿಂದ ಹಿನ್ನಡೆ ಆಗುತ್ತದೆ ಎಂದು ಹೇಳಿದ್ದೆ, ಈಗ ಅದು ಎಫೆಕ್ಟ್ ಆಗಿದೆ. ಹರಿಯಾಣದಲ್ಲಿ ಹಿನ್ನಡೆ ಆಗುತ್ತಿದೆ. ಪಾರ್ಟಿಗೆ ಮುಜುಗರ ಆಗಿದೆ ಎಂದು ಬೇಸರ ಹೊರಹಾಕಿದರು.

- Advertisement -


ಸಿಎಂ ವಿಚಾರದಲ್ಲಿ ನಾನು ಅಂದು ಹೇಳಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಪಕ್ಷಕ್ಕೆ ಧಕ್ಕೆಯಾದರೆ ನೋಟಿಸ್ ಕೊಡುತ್ತಾರೆ. ಪಕ್ಷದ ದೃಷ್ಟಿಯಿಂದ ಹೇಳಿದ್ದೇನೆ. ಇವತ್ತು ಹರಿಯಾಣ ಚುನಾವಣೆಯಲ್ಲಿ ಎಫೆಕ್ಟ್ ಆಗಿದೆ. ಪ್ರಚಾರದಲ್ಲಿ ಮೋದಿ ಕರ್ನಾಟಕದ ಬಗ್ಗೆ ಮಾತನಾಡಿದ್ದರು. ಪದೇ ಪದೇ ಮಾತನಾಡಿರುವುದು ಎಫೆಕ್ಟ್ ಆಗಿದೆ. ಇನ್ನೂ ಪೂರ್ಣ ಪ್ರಮಾಣದ ಫಲಿತಾಂಶ ಬಂದಿಲ್ಲ ಆದರೆ ಎಫೆಕ್ಟ್ ಆಗಿದೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದರು.



Join Whatsapp