Home ಟಾಪ್ ಸುದ್ದಿಗಳು ಮುಡಾ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಸಿಎಂ ವಿರುದ್ಧ ದೂರು

ಮುಡಾ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಸಿಎಂ ವಿರುದ್ಧ ದೂರು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.


ಈ ಕುರಿತಾದ ದೂರನ್ನು ಮೈಸೂರಿನ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, “ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ”ಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ದಾಖಲಿಸಿದ್ದಾರೆ.


ದೂರನ್ನು ಪಡೆದಿರುವ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದು ಪ್ರಕರಣ ನಾಳೆ (ಶುಕ್ರವಾರ-ಆಗಸ್ಟ್ 9) ವಿಚಾರಣೆಗೆ ಬರುವ ನಿರೀಕ್ಷೆ ಇದೆ.

Join Whatsapp
Exit mobile version